ರಾಯಚೂರು | ಸಿಡಿಲು ಬಡಿದು ಯುವಕ ಮೃತ್ಯು

Update: 2025-04-09 09:23 IST
ರಾಯಚೂರು | ಸಿಡಿಲು ಬಡಿದು ಯುವಕ ಮೃತ್ಯು
ಸಾಂದರ್ಭಿಕ ಚಿತ್ರ (File Photo)
  • whatsapp icon

ರಾಯಚೂರು | ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಮುಸ್ಸಂಜೆ ವೇಳೆ ನಡೆದಿದೆ.

ಅಂಕುಶದೊಡ್ಡಿ ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ.

ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸಲು ಹೋಗಿದ್ದ ರಾಮಣ್ಣ ನಾಯಕ ಮುಸ್ಸಂಜೆ ವೇಳೆ ಹಿಂದಿರುಗಿ ಬರುತ್ತಿದ್ದ ವೇಳೆ ಗುಡುಗು -ಸಿಡಿಲು ಸಹಿತ ಮಳೆ ಸುರಿದಿದೆ. ಈ ವೇಳೆ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಅವರನ್ನು ಮಸ್ಕಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದರೂ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಗ್ರಾಮಕ್ಕೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News