ಸಿರವಾರ | ವಸತಿ ನಿಲಯ ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

Update: 2025-04-03 18:43 IST
Photo of Letter of appeal
  • whatsapp icon

ಸಿರವಾರ : ಸಿರವಾರ ತಾಲೂಕಿಗೆ ಎಲ್ಲಾ ಇಲಾಖೆಯ ವಸತಿ ನಿಲಯಗಳನ್ನು ಮಂಜೂರು ಸೇರಿದಂತೆ ಹೊಸ ಕಾಲೇಜುಗಳನ್ನು ನಿರ್ಮಾಣ ಮಾಡಿ ವಿದ್ಯಾರ್ಥಿ ಹಾಗೂ ಯುವ ಜನರ ಶಿಕ್ಷಣಕ್ಕೆ ಅನುಕೂಲ ಮಾಡುವಂತೆ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಸಿರವಾರ ತಾಲೂಕು ಘಟಕದ ವತಿಯಿಂದ ಮನವಿ ನೀಡಿ ಒತ್ತಾಯಿಸಿದ್ದಾರೆ.

ತಾಲೂಕು ಘೋಷಣೆಯಾಗಿ ಅನೇಕ ವರ್ಷಗಳ ಕಳೆದಿದ್ದು, ಘೋಷಣೆ ನಂತರ ತಾಲೂಕುಗಳ ಅಭಿವೃದ್ಧಿಗಾಗಿ ಅನುದಾನ ಮೀಸಲಿಟ್ಟು ಅಭಿವೃದ್ಧಿ ಮಾಡಬೇಕಾದ ಸರ್ಕಾರ ಸಿರವಾರ ತಾಲೂಕಿಗೆ ಯಾವುದೇ ಅನುದಾನ ಘೋಷಿಸದೆ ಅತ್ಯಂತ ಹಿಂದುಳಿಯಲು ಸರ್ಕಾರವೇ ನೇರ ಕಾರಣವಾಗಿದೆ ಎಂದು ಸರ್ಕಾರದ ವಿರುದ್ದ ಹರಿಹಾಯ್ದರು.

ತಾಲೂಕಿನಾದ್ಯಂತ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹಳ್ಳಿಯಿಂದ ಪಟ್ಟಣಕ್ಕೆ ಸರಿಯಾದ ಸಮಯಕ್ಕೆ ಬಸ್ ಹಾಗೂ ವಾಹನ ಸೌಕರ್ಯವಿಲ್ಲದೆ ವಿದ್ಯಾರ್ಥಿ ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಕಾಲೇಜು ಬಿಟ್ಟ ನಂತರ ವಿದ್ಯಾರ್ಥಿನಿಯರಿಗೆ ಬಸ್ ನಿಲ್ದಾಣದಲ್ಲಿ ಬಸ್ ಬರುವವರೆಗೂ ಕಾಯುವ ಸಂದರ್ಭಗಳಲ್ಲಿ ಮುಜುಗರವೆನಿಸುವ ಸನ್ನಿವೇಶ ಎದುರಿಸುತ್ತಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಅಡಿಯಲ್ಲಿ ಕಾಲೇಜು ವಸತಿ ನಿಲಯಗಳು ಮತ್ತು ಸರ್ಕಾರಿ ಕಾಲೇಜುಗಳಿಲ್ಲದೇ ವಿದ್ಯಾರ್ಥಿಗಳಿಂದು ಉನ್ನತ ಶಿಕ್ಷಣಕ್ಕೆ ಬೇರೆ ಜಿಲ್ಲೆಗಳಿಗೆ ಹೋಗುವ ಅನಿವಾರ್ಯತೆ ಉಂಟಾಗಿದೆ. ತಾಲೂಕು ಘೋಷಣೆಯಾಗಿದ್ದು ವ್ಯರ್ಥ ಎನ್ನುವಂತಾಗಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆಯಿಂದ ತಾಲೂಕಿನಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘದ ಸಂಸ್ಥಾಪಕಿ ವಿಜಯರಾಣಿ, ದಲಿತ ವಿದ್ಯಾರ್ಥಿ ಪರಿಷತ್ ತಾಲೂಕಧ್ಯಕ್ಷ ಬಾಲಸ್ವಾಮಿ, ದ.ವಿ.ಪ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಅತೀಕ್, ರಾಜ ಮಹ್ಮದ್, ದಾನಪ್ಪ ಸೇರಿದಂತೆ ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News