ಬಾಣಂತಿಯರ ಸಾವು ಪ್ರಕರಣ; ಸಚಿವ ದಿನೇಶ್ ಗುಂಡೂರಾವ್ ವಜಾಗೊಳಿಸಲು ಬಿಜೆಪಿ ಪ್ರತಿಭಟನೆ

Update: 2025-01-03 08:45 GMT

ರಾಯಚೂರು: ರಾಜ್ಯದ ಹಲವೆಡೆ ಬಾಣಂತಿಯರ ಸಾವು ವ್ಯಾಪಕವಾಗಿ ನಡೆಯುತ್ತಿದ್ದು, ರಾಜ್ಯ ಸರ್ಕಾರ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

 ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವನ್ನಪ್ಪಿದ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು. ಬಾಣಂತಿಯರ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ದತ್ತು ತೆಗೆದುಕೊಳ್ಳಬೇಕು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಭದ್ರತೆಯನ್ನು ಖಾತ್ರಿ ಪಡಿಸಲು ಮೇಲ್ವಿಚಾರಣೆ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.

ಮಹಿಳೆಯರ,‌ ಬಾಣಂತಿಯರ ಸಾವು ತಡೆಯಲು ವಿಫಲವಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ‌ಹೆಬ್ಬಾಳಕರ್ ರಾಜೀನಾಮೆ ನೀಡಬೇಕು. ಬಾಣಂತಿಯರ ಸಾವು ಪ್ರಕರಣಗಳನ್ನು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಲಲಿತಾ ಕಡಗೋಲ, ಶರಣಮ್ಮ ಕಾಮರೆಡ್ಡಿ, ಸುಮಾ‌ ಗಸ್ತಿ, ಜಯಶ್ರೀ, ಸುಮತಿ‌ಶಾಸ್ತ್ರಿ, ನಾಗವೇಣಿ‌ಸಾಹುಕಾರ್, ಸುಲೋಚನಾ, ಪಿ.ಯಲ್ಲಪ್ಪ, ಡಾ.ನಾಗರಾಜ ಬಾಲ್ಕಿ, ಎನ್ ಕೆ ನಾಗರಾಜ, ವಿಜಯ ಭಾಸ್ಲರ್ ಇಟಗಿ ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News