ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರಕಾರ ಆಡಳಿತದಲ್ಲಿದೆ : ಬಿ.ವೈ.ವಿಜಯೇಂದ್ರ

Update: 2024-12-05 20:02 IST
Photo of Vijayendra

PC : x/@BYVijayendra

  • whatsapp icon

ರಾಯಚೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದೊಂದು ಅಭಿವೃದ್ಧಿ ಶೂನ್ಯ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಲಿಂಗಸುಗೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಯೋಜನೆಗಳನ್ನು ಕೊಡಲಿದ್ದಾರೆ ಎಂದು ಶಾಸಕರು ಗುದ್ದಲಿ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಆದರೆ, ಈವರೆಗೆ ಒಂದೇ ಒಂದು ಯೋಜನೆಯನ್ನು ಈ ಸರಕಾರ ನೀಡಿಲ್ಲ. ಅದರ ಪರಿಣಾಮವಾಗಿ ಗುದ್ದಲಿಗಳು ಮನೆ ಸೇರಿವೆ. ಕಾಂಗ್ರೆಸ್ ನಾಯಕರು ಮಾತ್ರ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿಗೆ ಬಿದ್ದಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಯಲ್ಲಿ ಕೆಲವು ಬೆಳವಣಿಗೆಗಳಿಂದ ಗೊಂದಲ ಉಂಟಾಗಿದೆ. ನನ್ನನ್ನೂ ಸೇರಿದಂತೆ ಪ್ರತಿಯೊಬ್ಬ ನಾಯಕರ ನಡವಳಿಕೆಗಳನ್ನು ಪಕ್ಷದ ಲಕ್ಷಾಂತರ ಕಾರ್ಯಕರ್ತರು, ಜನರು ಗಮನಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ವಿಜಯೇಂದ್ರ ಹೇಳಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕೇಂದ್ರದ ಬಿಜೆಪಿ ಸರಕಾರ ಕುತಂತ್ರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಸವರಾಜ ಬೊಮ್ಮಾಯಿ ಸರಕಾರದ ಅವಧಿಯಲ್ಲಿ ರೈತರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾನಿಧಿ ವಿದ್ಯಾರ್ಥಿವೇತನವನ್ನು ಈ ಸರಕಾರ ಸ್ಥಗಿತ ಮಾಡಿತು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳನ್ನು ಅಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವುದರಿಂದ ಸರಕಾರಿ ನೌಕರರಿಗೆ ಸಂಬಳ ಕೊಡಲು ಇವರಿಗೆ ಆಗುತ್ತಿಲ್ಲ. ಆದುದರಿಂದಲೇ, ಒಂದು ಕಡೆ ಕೆಲ ಸಚಿವರು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾತನಾಡುತ್ತಿದ್ದಾರೆ. ಶಕ್ತಿ ಯೋಜನೆ ನಿಲ್ಲಿಸುವ ಕುರಿತು ಉಪ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ ಎಂದು ಅವರು ತಿರುಗೇಟು ನೀಡಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News