ರಾಮನಗರ | ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ತಂದೆ, ಇಬ್ಬರು ಮಕ್ಕಳು ಮೃತ್ಯು

Update: 2025-01-09 07:07 GMT

ಸಾಂದರ್ಭಿಕ ಚಿತ್ರ

ರಾಮನಗರ : ಬೈಕ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಂದೆ, ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ರಾಮನಗರದ ಅಚಲು ಗ್ರಾಮದ ಬಳಿ ಗುರುವಾರ ವರದಿಯಾಗಿದೆ.

ಕನಕಪುರ-ರಾಮನಗರ ಹೆದ್ದಾರಿಯಲ್ಲಿನ ಅಚಲು ಗ್ರಾಮದ ಸಮೀಪ ದ್ವಿಚಕ್ರ ವಾಹನದಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ತೆರಳುತ್ತಿದ್ದರು. ಈ ವೇಳೆ ಬಸ್‌ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಬೈಕ್​ ಸವಾರನ ಪತ್ನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ರಾಮನಗರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News