ಬ್ರಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರದ ಇತಿಹಾಸ ಅಳಿಸುವ ಕೆಲಸ : ನಿಖಿಲ್ ಕುಮಾರಸ್ವಾಮಿ

Update: 2024-07-27 09:04 GMT

ರಾಮನಗರ : ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಅವರು, ರಾಮನಗರ ಎಂದಾಗ ರಾಮನ ಪಾದಸ್ಪರ್ಶದ ಪುಣ್ಯಕ್ಷೇತ್ರ ನೆನಪಾಗುತ್ತೆ. ಆದರೆ ಇದು ರಾಜಕೀಯ ಉದ್ದೇಶಕ್ಕೆ ಹೆಸರು ಬದಲಾವಣೆ ಮಾಡಲಾಗುತ್ತಿದೆ. ರಾಮನಗರ ಜಿಲ್ಲೆ ಸ್ಥಾಪನೆ ಆದಾಗ ಯಾರೂ ಕೂಡ ಇದಕ್ಕೆ ಚಕಾರ ಎತ್ತಲಿಲ್ಲ. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಲಿಲ್ಲ ಎಂದು ಹೇಳಿದರು.

ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬ್ರಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ ಆಗುತ್ತಿದೆ. ಇದಕ್ಕೆ ರಾಮನಗರದ ಜಿಲ್ಲೆಯ ಜನತೆಯ ವಿರೋಧವಿದೆ. ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಆದರೆ ಸ್ಥಳೀಯ ಜನರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ಕಂದಾಯ ದಾಖಲಾತಿ ಬದಲಾವಣೆ ಮಾಡಬೇಕು. ಸಾಕಷ್ಟು ಟೆಕ್ನಿಕಲ್ ಸಮಸ್ಯೆಗಳು ಎದುರಾಗುತ್ತವೆ. ಜನತೆ ನಿತ್ಯ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗುತ್ತೆ. ಈ ಬಗ್ಗೆ ದೊಡ್ಡಮಟ್ಟದ ಹೋರಾಟಕ್ಕೆ ಚರ್ಚೆ ಮಾಡುತ್ತದ್ದೇವೆ. ನಾಳೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಪಾದಯಾತ್ರೆಯ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News