ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ರಾಜಕೀಯ ದುರುದ್ದೇಶದಿಂದ ಕೂಡಿದೆ : ಎಚ್‌ಡಿಕೆ

Update: 2024-11-09 19:12 IST
Photo of H.D.Kumaraswamy

ಎಚ್.ಡಿ.ಕುಮಾರಸ್ವಾಮಿ

  • whatsapp icon

ಚನ್ನಪಟ್ಟಣ : ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿರುವುದು ರಾಜಕೀಯ ದುರುದ್ದೇಶ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ʼತಮ್ಮ ಅಧೀನ ಸಂಸ್ಥೆಗಳನ್ನು, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷ ನಾಯಕರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆʼ ಎಂದು ಅವರು ಆರೋಪಿಸಿದರು.

ʼರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಇಂಥ ಕೆಟ್ಟ ರಾಜಕೀಯಕ್ಕೆ ಜನರೇ ಪಾಠ ಕಲಿಸುತ್ತಾರೆʼ ಎಂದು ಕುಮಾರಸ್ವಾಮಿ ಅವರು ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News