ಭದ್ರಾವತಿ | ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

Update: 2025-04-15 12:25 IST
ಭದ್ರಾವತಿ | ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ಆರೋಪಿ ಕಾಲಿಗೆ ಗುಂಡೇಟು

  • whatsapp icon

ಶಿವಮೊಗ್ಗ: ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.

ಆರೋಪಿ ನಝರುಲ್ಲಾ ಕಾಲಿಗೆ ಪೊಲೀಸರ ಗುಂಡು‌ ಹಾರಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ಹೋಗಿದ್ದಾರೆ. ಈ ವೇಳೆ ಆರೋಪಿ ಪೊಲೀಸ್ ಸಿಬ್ಬಂದಿ ಮೌನೇಶ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದೆ.

ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪಿಎಸ್ಐ ಚಂದ್ರಶೇಖರ್ ನಾಯ್ಕ್‌ ಗುಂಡು ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ.

ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಗಾಂಜಾ ಪ್ರಕರಣ ದಾಖಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News