ಭದ್ರಾವತಿ: ರಸ್ತೆ ಅಪಘಾತಕ್ಕೆ ಇಬ್ಬರು ಯುವಕರು ಬಲಿ

Update: 2024-01-01 07:03 GMT

ಶಿವಮೊಗ್ಗ, ಜ.1: ಬೈಕಿಗೆ ಬೊಲೇರೊ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ರವಿವಾರ ರಾತ್ರಿ ಭದ್ರಾವತಿ ತಾಲೂಕಿನ ಸೀಗೆಬಾಗಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್(23) ಮತ್ತು ಚೇತನ್(23) ಮೃತಪಟ್ಟವರು. ಇವರು ಹುಟ್ಟುಹಬ್ಬ ಆಚರಿಸಿಕೊಳ್ಳಲೆಂದು ಬೈಕಿನಲ್ಲಿ ಭದ್ರಾವತಿಗೆ ತೆರಳುತ್ತಿದ್ದ ವೇಳೆ ಸೀಗೆಬಾಗಿ ಗ್ರಾಮದ ಬಳಿ ಬೊಲೇರೊ ವಾಹನ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೊಲೇರೊ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News