ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಂಧನವಾಗಬೇಕು : ಕೆ.ಎಸ್ ಈಶ್ವರಪ್ಪ

Update: 2024-05-09 08:05 GMT

ಶಿವಮೊಗ್ಗ: ಈ ಚುನಾವಣೆಯಲ್ಲಿ ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಂದ ಷಡ್ಯಂತ್ರ ನಡೆದಿದೆ. ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ವಾಮಾಚಾರ, ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿದ್ದಾರೆ. ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

ಈ ಬಗ್ಗೆ ಡಿಸಿ, ಎಸ್ಪಿಗೆ ನಾನು ದೂರು ನೀಡಿದ್ದೇನೆ. ಈ ಸುಳ್ಳು ಸುದ್ದಿಯಿಂದ ನನಗೆ ಅನೇಕ ವೋಟ್ ಅನ್ಯಾಯ ಆಗಿದೆ. ನನಗೆ ಮತ ನೀಡಲು ಬಂದವರಿಗೆ ಗೊಂದಲವಾಗಿದೆ. ಸುಳ್ಳು ಸುದ್ದಿಯಿಂದ ನನಗೆ ಮತದಾನ ಕಡಿಮೆಯಾಗಿದೆ. ಇದು ರಾಘವೇಂದ್ರ ಅವರ ಕುತಂತ್ರ, ಷಡ್ಯಂತ್ರ.  ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು. ಒಂದು ವಾರ ಗಡುವು ನೀಡುತ್ತೇನೆ. 15 ನೇ ತಾರೀಖಿನೊಳಗೆ ಕ್ರಮ ಕೈಗೊಳ್ಳದೆ ಹೋದರೆ ಹೋರಾಟ ಮಾಡುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ರಾಘವೇಂದ್ರ ಮೇಲೆ ಎಫ್ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.

ನನ್ನ ಚುನಾವಣೆಯ ಉದ್ದೇಶ ಯಶಸ್ವಿಯಾಗಿದೆ. ಜಿಲ್ಲೆಯ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ಬೇರೆ ಪಕ್ಷ ಕಟ್ಟಲು ನಾನು ಯಡಿಯೂರಪ್ಪ ಅಲ್ಲ. ಪಕ್ಷ ಶುದ್ದೀಕರಣದ ಸಿದ್ದಾಂತ ಮುಂದುವರಿಸುತ್ತೇನೆ. ಸಿದ್ಧಾಂತ, ಹಿಂದುತ್ವದ ಮುಂದೆ ಯಾರು ದೊಡ್ಡವರಲ್ಲ. ಸಿದ್ದಾಂತಕ್ಕೆ ಪೆಟ್ಟದಾಗ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಸಿಟಿ ರವಿ, ಪ್ರತಾಪ್ ಸಿಂಹ, ಅನಂತ್ ಕುಮಾರ್ ಅವರ ಧ್ವನಿಯಾಗಿ ನಾನು ನಿಂತಿದ್ದೇನೆ. ಒಂದೇ ತಿಂಗಳಲ್ಲಿ ನಾನು ಸಾಕಷ್ಟು ಪರಿವರ್ತನೆ ತಂದಿದ್ದೇನೆ ಎಂದು ಈಶ್ವರಪ್ಪ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News