ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ: ಕೆ.ಎಸ್​​ ಈಶ್ವರಪ್ಪ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

Update: 2024-03-31 12:59 GMT

ಶಿವಮೊಗ್ಗ: ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ ಹಿನ್ನೆಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್​​ ಈಶ್ವರಪ್ಪ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಈಶ್ವರಪ್ಪ ಈ ವೇಳೆ ಮತಪ್ರಚಾರ ಮಾಡಿದ್ದಾರೆ. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಚುನಾವಣಾ ಅಧಿಕಾರಿಗಳಿಂದ ತುಂಗಾನಗರ ಠಾಣೆಗೆ ದೂರು ಸಲ್ಲಿಸಲಾಗಿದೆ. ಹಾಗಾಗಿ ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News