ಶಿವಮೊಗ್ಗ | ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

Update: 2024-10-24 16:41 GMT

ಶಿವಮೊಗ್ಗ : ಸಂಚಾರ ಠಾಣೆ ಪೋಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್‌ ಮೇಲೆ ಹೊತ್ತೊಯ್ದ ಸಿನಿಮೀಯ ರೀತಿಯ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಎಚ್.ರಸ್ತೆಯಲ್ಲಿ ನಡೆದಿದೆ.

ಬಿ.ಎಚ್.ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್‌ ಸಿಬ್ಬಂದಿ ಕೂಡಲೇ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್‌ ಮೇಲೆ ಹತ್ತಿದ್ದಾರೆ.

ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ, ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ.

ಅದೃಷ್ಟವಶಾತ್‌ ಪೊಲೀಸ್‌ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News