ಅಪ್ಪ-ಮಕ್ಕಳಿಂದ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ : ಕೆ.ಎಸ್ ಈಶ್ವರಪ್ಪ

Update: 2024-04-14 06:38 GMT

ಶಿವಮೊಗ್ಗ: ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೇ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್​ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News