ಡಿಸಿ ಕಚೇರಿ ಎದುರಿನ ಮೈದಾನ ಉಳಿಸಿಕೊಳ್ಳಲು ಹೋರಾಟ : ಈಶ್ವರಪ್ಪ
ಶಿವಮೊಗ್ಗ : ರಕ್ತ ಚೆಲ್ಲಿಯಾದರೂ ಡಿಸಿ ಕಚೇರಿ ಎದುರು ಇರುವ ಆಟದ ಮೈದಾನದ ಜಾಗವನ್ನು ಉಳಿಸಿಕೊಳ್ಳುತ್ತೇವೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶನಿವಾರ ರಾಷ್ಟ್ರಭಕ್ತರ ಬಳಗದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದ ಸಂಬಂಧ ಜಿಲ್ಲಾಧಿಕಾರಿ ಆವರಣದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಈ ಜಾಗ ವಕ್ಫ್ ಮಂಡಳಿಗೆ ಸೇರಿದೆ ಎಂಬುದಕ್ಕೆ ಯಾವ ದಾಖಲೆಗಳೂ ಇಲ್ಲ. ಇದು ಸೂಡಾಗೆ ಸೇರಿದ ಜಾಗವಾಗಿದೆ. ಇಲ್ಲಿ ಆಟದ ಮೈದಾನ ಅಥವಾ ಪಾರ್ಕ್ ನಿರ್ಮಿಸಬಹುದೇ ಹೊರತು ನಮಾಜ್ ಮಾಡುವಂತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಇದೆ ಎಂದು ಹೇಳಲಾಗುತ್ತಿದೆ. ಅಜರ್ ಮೊಹಲ್ ಎಂದಿದೆ. ಅದು ಎಲ್ಲಿದೆಯೋ ಗೊತ್ತಿಲ್ಲ. ಅದಕ್ಕೂ ಈ ಆಟದ ಮೈದಾನಕ್ಕೂ ಸಂಬಂಧವೇ ಇಲ್ಲ ಎಂದರು.
ರಾಷ್ಟ್ರ ಭಕ್ತ ಬಳಗದ ಕೆ.ಇ. ಕಾಂತೇಶ್, ಶ್ರೀಕಾಂತ್ ಮುಂತಾದವರು ಮಾತನಾಡಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಈ.ವಿಶ್ವಾಸ್, ವಾಗೀಶ್,ಶ್ರೀಕಾಂತ್, ಮಹಾಲಿಂಗ ಶಾಸ್ತ್ರಿ, ಮೋಹನ್ ಜಾಧವ್, ರಾಜು, ಸತ್ಯನಾರಾಯಣ, ರವಿ, ಬಾಲು ಮುಂತಾದವರು ಇದ್ದರು.