ಶಿವಮೊಗ್ಗ| ಫೆಂಗಲ್ ಎಫೆಕ್ಟ್: ಮಂಗಳವಾರ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2024-12-03 03:09 GMT

ಶಿವಮೊಗ್ಗ: ಫೆಂಗಲ್‌ ಚಂಡಮಾರುತದ ಕಾರಣಕ್ಕೆ ಇನ್ನೆರಡು ದಿನ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಡಿ.03 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲೆಯಲ್ಲಿ ಡಿ.3 ಮತ್ತು 4ರಂದು ಆರೆಂಜ್‌ ಮತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.

ಡಿ.3ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News