ಸಾಗರ| ಕಟ್ಟಡದಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ

Update: 2025-03-11 18:12 IST
ಸಾಗರ| ಕಟ್ಟಡದಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ
  • whatsapp icon

ಸಾಗರ: ಇಲ್ಲಿನ ಬಿ.ಹೆಚ್ ರಸ್ತೆಯ ಕೋಯ ಶಾಲೆಯ ಮುಂಭಾಗದಲ್ಲಿರುವ ಕಟ್ಟಡದಲ್ಲಿ ಮಂಗಳವಾರ ಮದ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ.

ಈ ಕಟ್ಟಡದ ಮೆಲ್ಭಾಗದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದು, ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಅಲ್ಲೇ ಪಕ್ಕದಲ್ಲಿದ್ದ ಗುಜರಿ ವಸ್ತುಗಳಿಗೆ ಬೆಂಕಿ ತಗುಲಿದೆ. ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ನೋಡ ನೋಡುತ್ತಿದ್ದಂತೆ ದಟ್ಟ ಹೊಗೆ ಇಡೀ ಬಿ.ಎಚ್ ರಸ್ತೆಗೆ ಆವರಿಸಿದೆ.

ಬೆಂಕಿಯ ತೀವ್ರತೆ ಹೆಚ್ಚಾಗುತ್ತಲೆ ಸ್ಥಳಕ್ಕೆ ಅಗ್ನಿ ಶಾಮಕದಳ ಆಗಮಿಸಿ ಬೆಂಕಿ ನಂದಿಸಿದೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಸತತ ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆಯಲ್ಲಿ ಲಕ್ಷಾಂತರ ರೂ.ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ತಪ್ಪಿದ ದುರಂತ :

ಬೆಂಕಿ ಅವಘಡ ಸಂಭವಿಸಿದ ಕೂದಲೆಳೆ ಅಂತರದಲ್ಲೇ ಉರ್ದು ಶಾಲೆ ಇದ್ದು, ಮಕ್ಕಳು ಅಲ್ಲೇ ಆಟವಾಡುತ್ತಿದ್ದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

 

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News