ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು : ಸಂಸದ ಯದುವೀರ್ ಒಡೆಯರ್

Update: 2024-09-28 12:05 GMT

ಶಿವಮೊಗ್ಗ: "ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿರುವುದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು" ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ ಎಂಬುದು ಪ್ರಭಾವ ಇರುವ ಸ್ಥಾನ. ಹಾಗಾಗಿ ಅವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಹಗರಣ ನಡೆದಿರುವ ಬಗ್ಗೆ ಎಲ್ಲವೂ ಸ್ಪಷ್ಟವಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯುವುದಿಲ್ಲ. ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು" ಎಂದು ಹೇಳಿದರು.

ʼವಿಐಎಸ್‌ಎಲ್ ಕನ್ನಡಿಗರ ಹೆಮ್ಮೆಯ ಸಂಸ್ಥೆ. ಅದರ ಉಳಿವಿಗಾಗಿ ನಮ್ಮ ಪ್ರಯತ್ನ ಇರುತ್ತದೆ. ಕಾರ್ಖಾನೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಇದನ್ನ ನಮ್ಮ ಕುಟುಂಬ ಆರಂಭಿಸಿತ್ತು. ಅದನ್ನ ಉಳಿಸುವ ಕೆಲಸ ಆಗಲಿದೆ. ವಿಐಸ್‌ಎಲ್ ಹೆಮ್ಮೆಯ ಸಂಸ್ಥೆಯಾಗಿದೆ. ಅದಕ್ಕೆ ನಮ್ಮ ಪ್ರೋತ್ಸಾಹವಿದೆʼ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್, ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್, ಪ್ರಮುಖರಾದ ಎಸ್.ದತ್ತಾತ್ರಿ, ಮಾಜಿ ಶಾಸಕ ಕೆ.ಜಿ ಕುಮಾರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News