ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ : ಶಮನವಾಗದ ಬಂಡಾಯ, ವಿಫಲರಾದ ವರಿಷ್ಠರು

Update: 2024-03-17 10:08 GMT

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಮನವೊಲಿಸುವ ಬಿಜೆಪಿ ಮುಖಂಡರ ಪ್ರಯತ್ನ ಫಲಪ್ರದವಾಗುತ್ತಿಲ್ಲ.ಯಾರ ಮನವೊಲಿಕೆಗೂ ಬಗ್ಗದ ಈಶ್ವರಪ್ಪ ಬಂಡಾಯ ಸ್ಪರ್ಧೆ ಖಚಿತ ಎಂಬ ಸಂದೇಶ ರವಾನಿಸಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಕೆ.ಎಸ್.ಈಶ್ವರಪ್ಪ ಮನೆಗೆ ಬಿಜೆಪಿ ನಾಯಕರು ಬರುತ್ತಿದ್ದು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಬಂದು ಈಶ್ವರಪ್ಪ ‌ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಸಂಧಾನಕ್ಕೆ ಈಶ್ವರಪ್ಪ ಮಣಿಯದ ಹಿನ್ನೆಲೆಯಲ್ಲಿ ವಾಪಸ್ ಮರಳಿದರು.

ಮಧ್ಯಾಹ್ನ ಬಿಜೆಪಿ ಹೈಕಮಾಂಡ್ ಪರವಾಗಿ ಈಶ್ವರಪ್ಪ ಮನೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ್ ಅಗರವಾಲ್ ಹಾಗೂ ರಾಜೇಶ್ ಬಂದಿದ್ದು, ಈಶ್ವರಪ್ಪ ನಿವಾಸದಲ್ಲಿ ಸಭೆ ನಡೆಸಲು ಮುಂದಾಗಿದ್ದರು. ಆದರೆ  ಮೋಹನ್ ಅಗರವಾಲ್ ಸಭೆ ನಡುವೆಯೇ ಕೆ.ಎಸ್‌ ಈಶ್ವರಪ್ಪನವರು ಈಗ ಬರುತ್ತೇನೆ ಎಂದು ಮನೆಯಿಂದ ಹೊರಕ್ಕೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.  

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಚುನಾವಣಾ ಪ್ರಚಾರ ಕಾರ್ಯಕ್ಕೆ ಶಿವಮೊಗ್ಗಕ್ಕೆ ಬರುತ್ತಿದ್ದು, ಮುನ್ನಾ ದಿನ ಈಶ್ವರಪ್ಪ ಮನವೊಲಿಕೆ ಕಾರ್ಯಕ್ಕೆ ಪಕ್ಷದ ಮುಖಂಡರು ದೌಡಾಯಿಸುತ್ತಿರುವುದು ಕುತೂಹಲ ಕೆರಳಿಸಿದೆ.

ಈಶ್ವರಪ್ಪ ಶನಿವಾರ ಸಾಗರ ಬಳಿಯ ವರದಾಪುರದ ಶ್ರೀಧರ ಆಶ್ರಮಕ್ಕೆ ಭೇಟಿ ನೀಡಿದ ನಂತರ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಆರಂಭಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News