ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಮೂವರು ಅಧಿಕಾರಿಗಳ ವಿರುದ್ಧ ಎಫ್​ಐಆರ್​

Update: 2024-05-28 12:12 GMT

ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಮೂರು ಜನ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.

ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸುಚಿಸ್ಥನಾ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ನ್ಯಾಯ ಒದಗಿಸಿ:

ನನ್ನ ಗಂಡನ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕು. ನಾನು ಎರಡು ಮಕ್ಕಳನ್ನು ಇಟ್ಟುಕೊಂಡು ಹೇಗೆ ಬದುಕೋದು ಎಂದು ಗಂಡನನ್ನು ನೆನೆದು ಚಂದ್ರಶೇಖರ್ ಪತ್ನಿ ಕವಿತಾ ಕಣ್ಣೀರಿಟ್ಟಿದ್ದಾರೆ.

ನನ್ನ ಗಂಡನ ಸಾವಿಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಆಗಬೇಕು. ಮೂವರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರು ಒಂದು ರೂಪಾಯಿ ಲಂಚ ಪಡೆದಿಲ್ಲ. ನಾನು ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಾ ಇದ್ದೀನಿ ಎಂದು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಚಂದ್ರಶೇಖರ್ ಪತ್ನಿ ಕವಿತಾ ಪ್ರತಿಕ್ರಿಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News