ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ಪ್ರಕರಣ : ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಈ.ಡಿ. ವಶಕ್ಕೆ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದಿದ್ದ ಪ್ರಕರಣ ಸಂಬಂಧ ಬ್ಯಾಂಕ್‌ನ ಹಾಲಿ ಅಧ್ಯಕ್ಷ ಆರ್. ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದ್ದು, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಅವರನ್ನು 14 ದಿನಗಳವರೆಗೆ ಈ.ಡಿ. ವಶಕ್ಕೆ ಬುಧವಾರ ನೀಡಿ ಆದೇಶಿಸಿದೆ.
2014ರಲ್ಲಿ ಮಂಜುನಾಥಗೌಡ ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು. ಆ ವೇಳೆ ತನಿಖೆ ನಡೆಸಿದ್ದ ಸಿಐಡಿ, ಮಂಜುನಾಥಗೌಡರನ್ನು ಬಂಧಿಸಿತ್ತು.
ಬಳಿಕ ಅವರು ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಬ್ಯಾಂಕ್‌ನಲ್ಲಿ ನಡೆದ ಬಹುಕೋಟಿ ರೂ. ಪ್ರಕರಣವಾದ ಕಾರಣಕ್ಕೆ ಈ.ಡಿ. ತನಿಖೆ ಆರಂಭಿಸಿತ್ತು. ಈ ತನಿಖೆಗೆ ಮಂಜುನಾಥಗೌಡ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆ ತೆರವು ಆದ ಹಿನ್ನೆಲೆಯಲ್ಲಿ ಈ.ಡಿ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು. ವಿಚಾರಣೆ ಬಳಿಕ ಸಂಜೆ 7ರ ವೇಳೆಗೆ ಈ.ಡಿ. ಕಚೇರಿಗೆ ಅವರನ್ನು ಕರೆದೊಯ್ಯಲಾಗಿತ್ತು. ಅಲ್ಲಿ ಮತ್ತೆ ವಿಚಾರಣೆ ನಡೆಸಿ, ಮಂಗಳವಾರ ತಡರಾತ್ರಿ ಬಂಧಿಸಲಾಗಿತ್ತು