ಸಿಇಟಿ | ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಪರೀಕ್ಷಾ ಸಿಬ್ಬಂದಿ : ಆರೋಪ

Update: 2025-04-18 00:40 IST
ಸಿಇಟಿ | ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಪರೀಕ್ಷಾ ಸಿಬ್ಬಂದಿ : ಆರೋಪ

ಸಾಂದರ್ಭಿಕ ಚಿತ್ರ | PC: pexels

  • whatsapp icon

ಬೆಂಗಳೂರು : ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ಶಿವಮೊಗ್ಗ ಜಿಲ್ಲಾಧಿಕಾರಿಗೆ ದೂರು ನೀಡಿರುವುದಾಗಿ ವರದಿಯಾಗಿದೆ.

ಬುಧವಾರದಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ವೇಳೆ ಬ್ರಾಹ್ಮಣ ಸಮುದಾಯದವರ ಜನಿವಾರಗಳನ್ನು ಒತ್ತಾಯಪೂರ್ವಕವಾಗಿ ತೆಗೆಸಲಾಗಿದೆ. ಇದು ಧಾರ್ಮಿಕ ಭಾವನೆಗಳ ಮೇಲೆ ಮಾಡಿರುವ ಪ್ರಹಾರವಾಗಿದ್ದು, ಇದರಿಂದ ಪೋಷಕರಿಗೆ ಅನ್ಯಾಯವಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಬ್ರಾಹ್ಮಣ ಮಹಾಸಭಾ ತಿಳಿಸಿದೆ

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News