ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ತೀರ್ಥಹಳ್ಳಿಯಲ್ಲಿ ಎನ್ಐಎ ತಂಡದಿಂದ ಶೋಧ

Update: 2024-03-27 12:55 IST
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ತೀರ್ಥಹಳ್ಳಿಯಲ್ಲಿ  ಎನ್ಐಎ ತಂಡದಿಂದ ಶೋಧ
  • whatsapp icon

ಶಿವಮೊಗ್ಗ: ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್‌ಐಎ ತಂಡ ತನಿಖೆ ಆರಂಭಿಸಿದೆ. ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಬೆಂಗಳೂರಿನಿಂದ ಬಂದ ವಾಹನದಲ್ಲಿ 15ಕ್ಕೂ ಹೆಚ್ಚು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಪೊಲೀಸರ ನೆರವಿನೊಂದಿಗೆ ದಾಳಿ ಮಾಡಿದ್ದು, ಕೆಲ ಶಂಕಿತರ ಮನೆಗಳಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಾಂಬ್ ದಾಳಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದ್ದು, ಶಂಕಿತನ ಸಿಸಿಟಿವಿ ಚಿತ್ರಗಳು ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News