ಸಾಗರ | ಕಾರು ಢಿಕ್ಕಿ; ಪಾದಚಾರಿ ಮೃತ್ಯು
Update: 2024-12-28 15:14 GMT
ಸಾಗರ: ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಶನಿವಾರ ರಾತ್ರಿ ನಡೆದಿದೆ.
ತಿರುವಿನಲ್ಲಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದ್ದು, ಪರಿಣಾಮ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಕಾರು ಚಾಲಕ ಮತ್ತು ಸ್ಥಳೀಯರು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಗಾಯಾಳು ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯ ಕುರಿತಾದ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.