ಸಾಗರ | ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಹತ್ಯೆ

Update: 2025-03-16 14:19 IST
ಸಾಗರ | ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಹತ್ಯೆ

 ರಾಜು

  • whatsapp icon

ಸಾಗರ : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಹತ್ಯೆ ಮಾಡಿರುವ ಘಟನೆ ಇಲ್ಲಿನ ಜೆ.ಪಿ.ನಗರದಲ್ಲಿ ನಡೆದಿದೆ.

ತಮಿಳುನಾಡು ಮೂಲದ ರಾಜು (48) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಜೆ.ಪಿ.ನಗರದಲ್ಲಿ ಕಾಮದಹನ ಸಂದರ್ಭದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ರಾಜು ಎಂಬುವವರು ಅದೇ ಏರಿಯಾದ ಮಧು ಮತ್ತು ಮಾಲತೇಶ್ ಬ್ಯಾಡಗಿ ಇರುವ ಕಡೆ ಬಂದು ಕುಣಿಯುವುದು, ಚೇಡಿಸುವುದನ್ನು ಮಾಡಿದ್ದಾರೆ. ಇದರಿಂದ ಮಧು ಮತ್ತು ಮಾಲತೇಶ್ ಆಕ್ರೋಶಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ರಾತ್ರಿ 1ಗಂಟೆ ಸುಮಾರಿಗೆ ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಮೂವರ ನಡುವೆ ಜಗಳ ನಡೆದಿದ್ದು, ಮಧು ಮತ್ತು ಮಾಲತೇಶ್ ಆಕ್ರೋಶದಿಂದ ರಾಜು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡಿದ್ದ ರಾಜು ಅವರನ್ನು ಸ್ಥಳೀಯರು ಮನೆಗೆ ಬಿಟ್ಟು ಬಂದಿದ್ದರು. ಮಾರನೇ ದಿನ ರಾಜು ಗಂಭೀರವಾಗಿ ಗಾಯಗೊಂಡಿರುವುದನ್ನು ಗಮನಿಸಿ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರಾಜು ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧು ಮತ್ತು ಮಾಲತೇಶ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಪುಲ್ಲಯ್ಯ,ಸಬ್ ಇನ್ಸ್‌ಪೆಕ್ಟರ್ ನಾಗರಾಜ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News