ಶಿವಮೊಗ್ಗ: ಎಸೆಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತಕ್ಕೆ ಬಲಿ

Update: 2024-03-25 07:30 GMT

ಶಿವಮೊಗ್ಗ, ಮಾ.25: ಎಸೆಸೆಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿಯೊಬ್ಬಳು ಇಂದು ಬೆಳಗ್ಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.

ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕುಲ್ಸೂಂ (14) ಮೃತಪಟ್ಟ ವಿದ್ಯಾರ್ಥಿನಿ.

ಉಮ್ಮೆ ಕುಲ್ಸೂಂ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News