ಶಿವಮೊಗ್ಗ | ಜೀಪ್-ಟಿಟಿ ವಾಹನ ಮುಖಾಮುಖಿ ಢಿಕ್ಕಿ ; ಹಲವರಿಗೆ ಗಾಯ

Update: 2024-12-26 07:29 GMT

ಶಿವಮೊಗ್ಗ : ಜೀಪ್ ಹಾಗೂ ಟಿಟಿ ವಾಹನ ಮುಖಾಮುಖಿ ಢಿಕ್ಕಿಯಾಗಿ 5ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ನಡೆದಿದೆ.

ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ.

ಜೀಪ್‌ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಎಲ್ಲರೂ ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News