ಶಿವಮೊಗ್ಗ | ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ವಿದ್ಯುತ್ ಆಘಾತ : ಯುವಕ ಮೃತ್ಯು

Update: 2024-07-12 07:11 GMT

ಕಾರ್ತಿಕ್ (19) 

ಶಿವಮೊಗ್ಗ : ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದ್ದು, ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದ ಐಬಿಎಕ್ಸ್ ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ ಎನ್ನಲಾಗಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆಯೇ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ.

ಕಾರ್ತಿಕ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News