ಶಿವಮೊಗ್ಗ | ಹುಂಡೈ ಕಾರು ಶೋ ರೂಂಗೆ ಬೆಂಕಿ

Update: 2024-02-16 18:05 GMT

ಶಿವಮೊಗ್ಗ:  ಹುಂಡೈ ಕಾರು ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ

ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋ ರೂಂನಲ್ಲಿ ಈ ಘಟನೆ ಸಂಭವಿಸಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ ರೂಂ ಸಿಬ್ಬಂದಿಗಳು, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು, ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಶೋರೂಂ ಬಳಿ ಜಮಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News