ಶಿವಮೊಗ್ಗ | ಮೊಬೈಲ್ ಟವರನ್ನೇ ಹೊತ್ತೊಯ್ದ ಕಳ್ಳರು : ಪ್ರಕರಣ ದಾಖಲು

Update: 2024-10-24 12:38 IST
ಶಿವಮೊಗ್ಗ | ಮೊಬೈಲ್ ಟವರನ್ನೇ ಹೊತ್ತೊಯ್ದ ಕಳ್ಳರು : ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ (PC:Meta AI)

  • whatsapp icon

ಶಿವಮೊಗ್ಗ : ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್ ಟವರ್ ಕಳ್ಳತನವಾಗಿರುವ ವಿಚಿತ್ರ ಘಟನೆ ಟಿಪ್ಪು ನಗರದಲ್ಲಿ ನಡೆದಿರುವುದು ವರದಿಯಾಗಿದೆ.

ಶಿವಮೊಗ್ಗ ಟಿಪ್ಪುನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್ ಟವ‌ರ್ ಅಳವಡಿಸಿತ್ತು. ಅದೇ ಸಂಸ್ಥೆ ಟವರ್‌ನ ನಿರ್ವಹಣೆ ಮಾಡುತ್ತಿತ್ತು. ಕೋವಿಡ್ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್ ಟವರ್ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳು ನಾಪತ್ತೆಯಾಗಿದ್ದವು ಎಂದು ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.

ಈಗ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟವರ್ ಮತ್ತು ಬಿಡಿ ಭಾಗಗಳ ಅಂದಾಜು ಮೌಲ್ಯ 46.30 ಲಕ್ಷ ರೂ. ಎಂದು ಉಲ್ಲೇಖಿಸಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News