ಶಿವಮೊಗ್ಗ : ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಕೋರ್ಟ್ ಗೆ ಹಾಜರು
ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಪೊಲೀಸರು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
2021ರ ನವೆಂಬರ್‌ನಲ್ಲಿ ಕೇರಳ ಪೊಲೀಸರಿಂದ ಬಂಧಿತನಾಗಿದ್ದ ಬಿ.ಜಿ ಕೃಷ್ಣಮೂರ್ತಿ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಲ್ಲಿದ್ದರು. ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ಕರೆತಂದಿದ್ದ ತೀರ್ಥಹಳ್ಳಿ ಪೊಲೀಸರು ಬಾಡಿ ವಾರಂಟ್ ಮೇಲೆ ಬಿಗಿ ಬಂದೋಬಸ್ತ್ ನಲ್ಲಿ ಕೋರ್ಟ್ ಗೆ ಹಾಜರು ಪಡಿಸಿದರು.
ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದ ಬಿ.ಜಿ.ಕೃಷ್ಣಮೂರ್ತಿ ಅವರು ಮಾವೋವಾದಿ ನಕ್ಸಲರ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.
ಸಾಕೇತ್ ರಾಜನ್ ಬಳಿಕ ನಕ್ಸಲ್ ನಾಯಕನಾಗಿ ಗುರುತಿಸಿಕೊಂಡಿದ್ದ ಬಿ.ಜಿ.ಕೃಷ್ಣಮೂರ್ತಿ ಪ್ರಮುಖ 5 ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ.
ತೀರ್ಥಹಳ್ಳಿ ಠಾಣೆ 2 ಹಾಗೂ ಆಗುಂಬೆ ಠಾಣೆಯ 3 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ನೇತೃತ್ವದಲ್ಲಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.