ಶಿವಮೊಗ್ಗ | ಶಾಲಾ ಬಸ್‌ ಪಲ್ಟಿ : 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

Update: 2024-02-17 10:19 GMT

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ಪಲ್ಟಿಯಾದ ಹಿನ್ನಲೆಯಲ್ಲಿ  ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ.

ಇಲ್ಲಿನ ಖಾಸಗಿ ಶಾಲೆಯ ಮಕ್ಕಳನ್ನು ಕರೆದೊಯ್ಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಅವರನ್ನು ದುರ್ಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಭದ್ರಾವತಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News