ಶಿವಮೊಗ್ಗ| ಸರಣಿ ಅಪಘಾತ; ವಾಹನಗಳು ಜಕಂ

Update: 2023-11-25 12:06 GMT

ಶಿವಮೊಗ್ಗ: ನಗರದ ಸಾಗರ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.

ಸಾಗರ ರಸ್ತೆಯ ಎಪಿಎಂಸಿ ಗೇಟ್ ಮುಂಭಾಗ ದುರ್ಗಾಂಭ ಪೆಟ್ರೋಲ್ ಬಂಕ್ ಬಳಿ ಘಟನೆ ಸಂಭವಿಸಿದೆ. ಬ್ರೀಝಾ ಕಾರು, ಓಮ್ನಿ ಮತ್ತು ಆಟೋ ಮಧ್ಯೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬ್ರೀಝಾ ಕಾರು ಮುಂದೆ ಚಲಿಸುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ. ಓಮ್ನಿ ಕಾರು ಮುಂದಿದ್ದ ಆಟೋಗೆ ಢಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದೆ. ಘಟನೆ ಹಿನ್ನೆಲೆ ಸಾಗರ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News