ಶಿವಮೊಗ್ಗ: ಏಳು ಮಂದಿ ಶಂಕಿತ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ
Update: 2024-10-18 06:26 GMT
ಶಿವಮೊಗ್ಗ: ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಏಳು ಮಂದಿ ಶಂಕಿತ ಬಾಂಗ್ಲಾ ಪ್ರಜೆಗಳನ್ನು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸವಳಂಗ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಏಳು ಮಂದಿಯನ್ನು ಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಶಂಕೆ ಇದೆ. ಈ ಹಿನ್ನೆಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರು ಅಕ್ರಮವಾಗಿ ನೆಲೆಸಿರುವುದು ಖಚಿತವಾದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಯನಗರ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.