ತಂದೆ ಓದಿದ ಶಾಲೆಗೆ ಭೇಟಿ : ಮಧುಬಂಗಾರಪ್ಪ ಭಾವುಕ

Update: 2024-11-30 13:42 GMT

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿಕಾರಿಪುರ ತಾಲ್ಲೂಕಿನ ಶಿರಾಳ ಕೊಪ್ಪದಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ಶನಿವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪನವರು ಭೇಟಿ ನೀಡಿದ್ದಾರೆ.

ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವ್ಯಕ್ತಿಗಳಲ್ಲಿ ಅನೇಕರು ದೊಡ್ಡ-ದೊಡ್ಡ ಹುದ್ದೆಯನ್ನು ಅಲಂಕರಿಸಿದ್ದಾರೆ. ನಮ್ಮ ತಂದೆಯು ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯದ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿ, ಅನೇಕ ಜನಪರ ಯೋಜನೆಯನ್ನು ಜಾರಿ ಮಾಡಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ತಮ್ಮ ತಂದೆಯ ಹಾದಿಯಲ್ಲಿ ನಾನು ಕೂಡ ಸರಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಶಿರಾಳ ಕೊಪ್ಪದಲ್ಲಿ ನೂತನವಾಗಿ ಸುಸಜ್ಜಿತವಾದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಯನ್ನು ನಿರ್ಮಾಣ ಮಾಡಿ ಈ ಭಾಗದ ಜನರ ಬಹು ದಿನದ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ಅನೇಕ ಗಣ್ಯರು, ಜನಪ್ರತಿನಿಧಿಗಳು ಹಾಗೂ ಶಾಲಾ- ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News