ಶಿವಮೊಗ್ಗ | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್ ದಾಖಲು

Update: 2024-04-06 18:08 GMT

ಶಿವಮೊಗ್ಗ : ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ, ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ.

ಎ.5 ರಂದು ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅಲ್ಲಿ ಅವರ ಮನೆಯ ಅಂಗಳದಲ್ಲಿ ಸುಮಾರು 50 ರಿಂದ 60 ಜನರನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ.

ಈ ಕಾ‍ರ್ಯಕ್ರಮ ನಡೆಸಲು ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದ್ದರಿಂದ, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಸಂಜ್ಞೆಯ ಅಪರಾದ ಪ್ರಕರಣವಾದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಕೆ.ಎಸ್‌ ಈಶ್ವರಪ್ಪ ರವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News