ಶಿವಮೊಗ್ಗ | ಅಬ್ಬಿ ಫಾಲ್ಸ್​ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ಯುವಕ ಮೃತ್ಯು

Update: 2024-06-24 12:42 GMT

ಸಾಂದರ್ಭಿಕ ಚಿತ್ರ

ಶಿವಮೊಗ್ಗ : ಸೆಲ್ಫಿ ತೆಗೆದುಕೊಳ್ಳಲು ಹೋಗಿ ಜಲಪಾತದದ ಬಳಿ ಕಾಲು ಜಾರಿ ಬಿದ್ದು, ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಫಾಲ್ಸ್​ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

12 ಜನರ ಗೆಳೆಯರೊಂದಿಗೆ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ಮೂಲದ ವಿನೋದ್(26) ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲ ಜಾರಿ ಬಿದ್ದು ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ವಿನೋದ್​ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News