ಶಿವಮೊಗ್ಗ | ಚಲಿಸುತ್ತಿದ್ದ ಸಾರಿಗೆ ಬಸ್ ಬೆಂಕಿಗಾಹುತಿ : ಪ್ರಯಾಣಿಕರು ಅಪಾಯದಿಂದ ಪಾರು

Update: 2024-08-06 07:33 GMT

ಶಿವಮೊಗ್ಗ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಜೋಗ ರಸ್ತೆಯಲ್ಲಿ ನಡೆದಿದೆ.

ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಅಪಾಯ ಅರಿತ ಚಾಲಕ ಕೂಡಲೇ ಬಸ್ಸನ್ನು ನಿಲ್ಲಿಸಿದ್ದಾನೆ. ಬಳಿಕ ಬಸ್‌ನಲ್ಲಿದ್ದ ಎಲ್ಲಾ 12 ಪ್ರಯಾಣಿಕರು ಕೆಳಗಿಳಿದಿದ್ದಾರೆ. ಈ ವೇಳೆಗಾಗಲೇ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ವಿಚಾರ ತಿಳಿದ ಕೂಡಲೇ ಘಟನಾ  ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News