ಶಿವಮೊಗ್ಗ | ನೀರಿನ ಮೋಟರ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ ಯುವತಿ ಮೃತ್ಯು

Update: 2025-03-15 17:17 IST
ಶಿವಮೊಗ್ಗ | ನೀರಿನ ಮೋಟರ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ ಯುವತಿ ಮೃತ್ಯು

ಸಾಂದರ್ಭಿಕ ಚಿತ್ರ

  • whatsapp icon

ಶಿವಮೊಗ್ಗ : ವಿದ್ಯುತ್ ಸ್ಪರ್ಶಿಸಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ನಿಸರ್ಗ(18) ಎಂದು ಗುರುತಿಸಲಾಗಿದೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದಳು. ಈ ವೇಳೆ ಕರೆಂಟ್ ಹೊಡೆದಿದ್ದು, ಯುವತಿ ಸ್ಥಳದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಕರೆಂಟ್ ತಗುಲಲು ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಮೃತ ಯುವತಿಯು ಹೊಳೆಹೊನ್ನೂರು ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದಳು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News