ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಹಲವರಿಗೆ ಗಾಯ

Update: 2024-10-16 05:16 GMT

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್‌ ಚರಂಡಿಗೆ ಪಲ್ಟಿಯಾದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಿಟಿ ಬಸ್ಸು ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ತೆರಳುತ್ತಿತ್ತು. ರೈಲ್ವೆ ಗೇಟ್‌ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಫೆನ್ಸ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಮತ್ತು ಸರ್ಜಿ ಆಸ್ಪತ್ರೆಗೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News