ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಈಡಿ ವಶಕ್ಕೆ

Update: 2025-04-08 13:06 IST
ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಈಡಿ ವಶಕ್ಕೆ

PC: x.com/publictvnews

  • whatsapp icon

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಗರದ ಅಪೆಕ್ಸ್‌ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡ ಅವರನ್ನು ಈಡಿ ಅಧಿಕಾರಿಗಳು ಅಲ್ಲಿಯೇ ವಶಕ್ಕೆ ಪಡೆದು ಕೆಲಕಾಲ ವಿಚಾರಣೆ ನಡೆಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಸಿಬ್ಬಂದಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ₹68 ಕೋಟಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿ ಐದು ಕಡೆ ದಾಳಿ ನಡೆಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News