ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

Update: 2024-11-30 12:29 GMT

ರಾಜೇಶ್ ಶೆಟ್ಟಿ

ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಶನಿವಾರ ನಡೆದಿದೆ.

ರಾಜೇಶ್ ಶೆಟ್ಟಿ (38) ಕೊಲೆಗೀಡಾದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಹಳೇ ಬೊಮ್ಮನಕಟ್ಟೆ ಮುಖ್ಯರಸ್ತೆಯ ಮಾರಮ್ಮನಗುಡಿ ಸಮೀಪದ ಗ್ಯಾರೇಜ್ ಬಳಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಹಳೆಯ ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿಯಿಂದ ರಾಜೇಶ್ ಶೆಟ್ಟಿಯು ಸ್ಥಳದಲ್ಲೇ ಅಸುನೀಗಿದ್ದಾನೆ ಎನ್ನಲಾಗಿದೆ. ರಾಜೇಶ್ ಶೆಟ್ಟಿಯು ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದಾನೆ. ಈತನ ವಿರುದ್ದ ಆರೇಳು ಪ್ರಕರಣಗಳಿವೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೌಡಿ ರಾಜೇಶ್ ಶೆಟ್ಟೆ ಹತ್ಯೆ ಮಾಡಿದ್ದ ಆರೋಪಿ ಪತ್ತೆಗೆ ಮೂರು ತಂಡ ರಚಿಸಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು,ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ರಾಜೇಶ್ ಎಂಬಾತನ ಕೊಲೆಯಾಗಿದೆ. ಆರೋಪಿ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News