ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ; ಶಿವಮೊಗ್ಗದ ವ್ಯಕ್ತಿ ಮೃತ್ಯು
Update: 2025-04-22 18:05 IST

ಮಂಜುನಾಥ್ ರಾವ್
ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ 47 ವರ್ಷದ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ.
ಶಿವಮೊಗ್ಗದ ವಿಜಯನಗರದ ನಿವಾಸಿ ಮಂಜುನಾಥ್ ರಾವ್ ಕುಟುಂಬ ಸಮೇತರಾಗಿ ಏ.19 ರಂದು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು.ಪ್ರವಾಸದ ವೇಳೆ ಪಹಲ್ಗಾಮ್ ಬಳಿ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಂಜುನಾಥ್ ಅವರ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಅವರನ್ನು ರಕ್ಷಿಸಿ, ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.