ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್

ಎಂ.ಬಿ.ಪಾಟೀಲ್
ಶಿವಮೊಗ್ಗ : ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಸತೀಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಒಟ್ಟಿಗೆ ಕುಳಿತು ಚರ್ಚೆ ನಡೆಸಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಇದೆ, ಎಲ್ಲವನ್ನೂ ಅವರೇ ತೀರ್ಮಾನ ಮಾಡುತ್ತಾರೆ. ಸದ್ಯಕ್ಕೆ ಯಾವುದೇ ಸ್ಥಾನ ಖಾಲಿಯೂ ಇಲ್ಲ, ಈಗ ಏನಿದ್ದರೂ ಬೆಳಗಾವಿಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವತ್ತ ನಾಯಕರು ತಮ್ಮ ಗಮನ ಕೇಂದ್ರೀಕರಿಸಿದ್ದಾರೆ ಎಂದರು.
ಎಐಸಿಸಿ ಕಾರ್ಯದರ್ಶಿ ಸುರ್ಜೇವಾಲಾ ನೋಟಿಸ್ ನೀಡಿದ್ದಾರೆ ಎಂಬ ಮಂಜುನಾಥ ಭಂಡಾರಿ ಅವರ ಹೇಳಿಕೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಕಾರ್ಯಾಧ್ಯಕ್ಷರಾಗಿ ಅವರು ಹೇಳಿರಬಹುದು, ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದ್ದಾರೆ ಎಂಬ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ, ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ, ನಮ್ಮ ಮನೆಗೂ ಅಶೋಕ್ ಸೇರಿದಂತೆ ಬಿಜೆಪಿ ಅನೇಕ ಮುಖಂಡರು ಬಂದು ಹೋಗಿದ್ದಾರೆ, ನಾನು ಸಹ ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಹೋಗಿದ್ದೇನೆ ಹಾಗೆಂದ ಮಾತ್ರಕ್ಕೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿದರು. ಇನ್ನು ಹಾಗೆ ನೋಡಿದರೆ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ಎಲ್ಲವೂ ಸರಿಯಾಗಿಯೇ ಇದೆ ಎಂದರು.
ಸಿಎಂ ರೇಸ್ ನಲ್ಲಿ ಎಂ.ಬಿ.ಪಾಟೀಲ್ ಹೆಸರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಚೆರ್ಚೆ ಇಲ್ಲ ಎಂದರು.
ಶಿವಮೊಗ್ಗ ಏರ್ಪೋರ್ಟ್ ನೈಟ್ ಲ್ಯಾಂಡಿಂಗ್ ಫೆಸಿಲಿಟಿ ಕುರಿತಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಮೊನ್ನೆಯಷ್ಟೇ 165 ಕೋಟಿ ರೂ. ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ, ಎಲ್ಲಾ ರೀತಿಯ ಸೌಲಭ್ಯಗಳನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಒದಗಿಸುತ್ತೇವೆ ಎಂದರು.