ತೀರ್ಥಹಳ್ಳಿ: ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2024-01-19 07:01 GMT

ಶಿವಮೊಗ್ಗ, ಜ.19 ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಬಿಳುಕೊಪ್ಪದಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಬಿಳುಕೊಪ್ಪ ಗ್ರಾಮದ ಅಧೀಕ್ಷಾ (20) ಮೃತ ವಿದ್ಯಾರ್ಥಿನಿ. ಇವರು ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು.

ಅಧೀಕ್ಷಾ ಗುರುವಾರ ರಾತ್ರಿ ತಂದೆ ತಾಯಿ ಮನೆಯಲ್ಲಿ ಇಲ್ಲದ ವೇಳೆ ಕೋಣೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಇದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News