ಮತ್ತೆ ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸವಿದೆ : ವಿಜಯೇಂದ್ರ

Update: 2025-02-03 12:28 IST
Photo of B.Y.Vijayendra

ಬಿ.ವೈ.ವಿಜಯೇಂದ್ರ 

  • whatsapp icon

ಶಿವಮೊಗ್ಗ: ಚುನಾವಣೆಯಲ್ಲಿ ಪುನಃ ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸವಿದೆ. ಪಕ್ಷದೊಳಗಿನ ಆಂತರಿಕ ಗೊಂದಲ ವಾರದ ಬಳಿಕ ಸರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವಕ್ತಪಡಿಸಿದ್ದಾರೆ.

ಯತ್ನಾಳ್ ಹೇಳಿಕೆ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂಬ ಸದಾನಂದಗೌಡ ಹೇಳಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕೋ ಅವೆಲ್ಲವೂ ಆಗಿ ಹೋಗಿದೆ. ಕಳೆದ ವರ್ಷದಿಂದ ನಾನು ಎಲ್ಲಿಯೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಯಾರೇ ಏನೇ ಹೇಳಿದರೂ ಯಾರ ವಿರುದ್ಧವೂ ಬಹಿರಂಗ ಹೇಳಿಕೆ ಕೊಟ್ಟಿಲ್ಲ. ಪಕ್ಷದ ವಿರುದ್ಧವೂ ಹೇಳಿಕೆ ಕೊಟ್ಟಿಲ್ಲ. ಬಿಜೆಪಿ ರಾಜ್ಯದ ಅಧ್ಯಕ್ಷನಾಗಿ ಕರ್ತವ್ಯದ ಅರಿವು ನನಗಿದೆ. ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇನೆ. 8-10 ದಿನಗಳಲ್ಲಿ ರಾಜ್ಯದ ಅಧ್ಯಕ್ಷ ಯಾರೆಂಬುದಕ್ಕೆ ಉತ್ತರ ಸಿಗಲಿದೆ .ಬಳಿಕ ಎಲ್ಲಾ ಸಮಸ್ಯೆಗಳು ಬಗೆ ಹರಿಯಲಿದೆ ಎಂದರು.

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಈ ರೀತಿ ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ವ್ಯವಸ್ಥಿತವಾಗಿ ಸಂಘಟನೆಯ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿ ಪಕ್ಷದಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ ಎಂದರು.

ಕಳೆದ ಒಂದು ವರ್ಷದಿಂದ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನಾನು ಯಾವ ರೀತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೆನೆ ಎಂಬುದು ಕಾರ್ಯಕರ್ತರಿಗೆ, ಪಕ್ಷದ ಮುಖಂಡರಿಗೆ ಗೊತ್ತಿದೆ. ನಾನು ರಾಜ್ಯದ ಬಿಜೆಪಿ ಅಧ್ಯಕ್ಷನಾಗುತ್ತೇನೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇ ರೀತಿ ಪೈಪೋಟಿ ಇದೆ. ಎಲ್ಲವನ್ನೂ ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News