ವಿಶ್ವಕಪ್:‌ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನ

Update: 2023-11-07 08:24 GMT

Photo: X/@cricketworldcup

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯ ಎದುರಿನ ಪಂದ್ಯದಲ್ಲಿ ಟಾಸ್‌ ಗೆದ್ದ ಅಫ್ಘಾನಿಸ್ತಾನವು ಬ್ಯಾಟಿಂಗ್ ಆಯ್ದುಕೊಂಡಿದೆ.

ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯವು ಸೆಮಿ ಫೈನಲ್ ತಲುಪುವ ಹಾದಿಯಲ್ಲಿದೆ.

ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಆಸೀಸ್ ಆ ನಂತರ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸಿ ಅದ್ಭುತ ಪ್ರತಿಹೋರಾಟ ನೀಡಿದೆ. ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ 33 ರನ್ ಗಳ ಜಯ ಸಾಧಿಸಿತ್ತು.

ಕೆಲವು ಚಿತ್ತಾಕರ್ಷಕ ಪ್ರದರ್ಶನದ ಮೂಲಕ ಅಫ್ಘಾನ್ ಕ್ರಿಕೆಟ್ ತಂಡ ನಿರೀಕ್ಷೆಗೂ ಮೀರಿ ಆಡುತ್ತಿದೆ. 7 ಪಂದ್ಯಗಳ ಪೈಕಿ 4ರಲ್ಲಿ ಜಯ ಸಾಧಿಸಿದೆ. ಸೆಮಿ ಫೈನಲ್ ತಲುಪುವ ಅಲ್ಪ ಅವಕಾಶವನ್ನು ಹೊಂದಿದೆ. ಹಿಂದಿನ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು 7 ವಿಕೆಟ್ಗಳಿಂದ ಮಣಿಸಿದ್ದ ಅಫ್ಘಾನ್ ತಂಡ ಸತತ ಮೂರನೇ ಗೆಲುವು ದಾಖಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News