ಈ ವರ್ಷದ ಐಪಿಎಲ್ ನಲ್ಲಿ ಮೊದಲ ಪಂದ್ಯ ಆಡಿದ ಅರ್ಜುನ್ ತೆಂಡುಲ್ಕರ್
ಹೊಸದಿಲ್ಲಿ: ಲಕ್ನೊ ಸೂಪರ್ ಜಯಂಟ್ಸ್ ವಿರುದ್ಧ ಶುಕ್ರವಾರ ವಾಂಖೆಡೆ ಸ್ಟೇಡಿಯಮ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಆಡಿರುವ ಕೊನೆಯ ಲೀಗ್ ಪಂದ್ಯದಲ್ಲಿ ಲೆಜೆಂಡರಿ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಮುಂಬೈ ಪರ ಆಡಿದ್ದಾರೆ.
ಅರ್ಜುನ್ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬದಲಿಗೆ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದು ಈ ವರ್ಷದ ಐಪಿಎಲ್ ಟೂರ್ನಿಯಲ್ಲಿ ಅರ್ಜುನ್ ತೆಂಡುಲ್ಕರ್ ಆಡಿರುವ ಮೊದಲ ಪಂದ್ಯ ಇದಾಗಿದೆ.
ಅರ್ಜುನ್ ಕಳೆದ ಋತುವಿನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದರು. 3 ವಿಕೆಟ್ಗಳನ್ನು ಕಬಳಿಸಿ, ಕೇವಲ 13 ರನ್ ಗಳಿಸಿದ್ದರು.
ಅರ್ಜುನ್ ಅವರ ಆಲ್ರೌಂಡ್ ಸಾಮರ್ಥ್ಯವನ್ನು ಗುರುತಿಸಿದ್ದ ಮುಂಬೈ ಇಂಡಿಯನ್ಸ್ ತಂಡ 2021ರ ಹರಾಜಿನಲ್ಲಿ ಮೂಲ ಬೆಲೆ 20 ಲಕ್ಷ ರೂಪಾಯಿಗೆ ಖರೀದಿಸಿತ್ತು.
15ನೇ ಆವೃತ್ತಿಯ ಐಪಿಎಲ್ ಗಿಂತ ಮೊದಲು ಮುಂಬೈ ಇಂಡಿಯನ್ಸ್ ತಂಡ 30 ಲಕ್ಷ ರೂ.ಗೆ ಅರ್ಜುನ್ ರನ್ನು ತನ್ನಲ್ಲೇ ಉಳಿಸಿಕೊಂಡಿತ್ತು.
ಮುಂಬೈ ತಂಡದೊಂದಿಗೆ ತನ್ನ ದೇಶೀಯ ಕ್ರಿಕೆಟ್ ವೃತ್ತಿಜೀವನ ಆರಂಭಿಸಿದ ಅರ್ಜುನ್ 2022ರಲ್ಲಿ ಗೋವಾಕ್ಕೆ ಸ್ಥಳಾಂತರಗೊಂಡಿದ್ದರು. ಅಲ್ಲಿ ಅವರು ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಬೌಲಿಂಗ್ ದಾಳಿಯನ್ನು ಮುನ್ನಡೆಸುವ ಹೊಣೆ ವಹಿಸಿದ್ದಾರೆ.