ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನ
Update: 2023-09-25 12:24 GMT
ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಚಿನ್ನದ ಪದಕ ಜಯಿಸಿತು.
ಸೋಮವಾರ ಶ್ರೀಲಂಕಾ ಎದುರಿನ ಫೈನಲ್ ಪಂದ್ಯದಲ್ಲಿ ಟೈಟಸ್ (6ಕ್ಕೆ3) ಬೌಲಿಂಗ್ ಬಲದಿಂದ ಭಾರತ ತಂಡವು ಶ್ರೀಲಂಕಾ ಎದುರು 19 ರನ್‌ಗಳಿಂದ ಜಯಿಸಿತು.
ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕ ಬ್ಯಾಟರ್ ಸ್ಮೃತಿ ಮಂದಾನ 46 ರನ್, ಮತ್ತು ಜೆಮಿಮಾ ರಾಡ್ರಿಗಸ್ 42 ರನ್, ಬ್ಯಾಟಿಂಗ್ ಬಲದಿಂದ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 116 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 97 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಸಿನಿ ಪೆರೆರಾ 25 ನಿಕಾಶಿ ಡಿಸಿಲ್ವಾ 23 ರನ್ ಗಳಿಸಿದರು.
ಟೈಟಸ್ ಪ್ರಮುಖ ಮೂವರು ಬ್ಯಾಟರ್‌ಗಳ ವಿಕೆಟ್ ಗಳಿಸಿದರು. ರಾಜೇಶ್ವರಿ ಗಾಯಕವಾಡ 20ಕ್ಕೆ2, ದೀಪ್ತಿ ಶರ್ಮಾ, ಪೂಜಾ ವಸ್ತ್ರಕರ್ ಮತ್ತು ದೇವಿಕಾ ವೈದ್ಯ ತಲಾ ಒಂದು ವಿಕೆಟ್ ಗಳಿಸಿದರು.