ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಪಂದ್ಯ; ಶ್ರೀಲಂಕಾ 209 ರನ್ ಗೆ ಆಲೌಟ್

Update: 2023-10-16 12:51 GMT

Photo : cricketworldcup.com

ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ.

ಟಾಸ್ ಗೆದ್ದ ಶ್ರೀಲಂಕಾ ತಂಡ ಆಸೀಸ್ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾದ ಆರಂಭಿಕ ಬ್ಯಾಟರ್ಸ್ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮೊದಲ ವಿಕೆಟ್ ಪತನ ಕ್ಕೆ 125 ರನ್ ಜೊತೆಯಾಟ ಆಡಿದ ಪತುಮ್ ನಿಸಂಕಾ ಹಾಗೂ ಕುಶಾಲ್ ಪರೇರಾ ಆಸೀಸ್ ಬೌಲರ್ಸ್ ಗಳನ್ನು ಕಾಡಿದರು. ಪತುಮ್ ನಿಸಂಕಾ 8 ಬೌಂಡರಿ ಸಹಿತ 61 ರನ್ ಗಳಿಸಿದರೆ ಕುಶಾಲ್ ಪರೇರಾ 12 ಬೌಂಡರಿ ಸಹಿತ 78 ರನ್ ಅರ್ಧಶತಕ ಬಾರಿಸಿ ಪ್ಯಾಟ್ ಕಮ್ಮಿನ್ಸ್ ಗೆ ವಿಕೆಟ್ ಒಪ್ಪಿಸಿದರು. ಉತ್ತಮ ಆರಂಭದ ಹೊರತಾಗಿಯೂ ತಂಡ ಸ್ಥಿರ ಪ್ರದರ್ಶನ ನೀಡಲು ವಿಫಲವಾಯಿತು.

ಆಸ್ಟ್ರೇಲಿಯ ಬೌಲಿಂಗ್ ಎದುರು ನಿಲ್ಲಲಾಗದೆ ಲಂಕಾ ವಿಕೆಟ್ ಗಳು ಒಂದಾದ ಮೇಲೆ ಒಂದರಂತೆ ಬೀಳತೊಡಗಿತು. ಕುಶಾಲ್ ಮೆಂಡಿಸ್ 9 ರನ್ ಗೆ ಆಡಂ ಝಾಂಪ ಬೌಲಿಂಗ್ ನಲ್ಲಿ ಡೇವಿಡ್ ವಾರ್ನರ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ನಾಲ್ಕನೇ ಕ್ರಮಾಂಕದ ಸದೀರ ವಿಕ್ರಮ 8 ರನ್ ಗಳಿಸಿ ಆಡಂ ಝಾಂಪ ಗೆ ಎಲ್ ಬಿಡಬ್ಲ್ಯೂ ಆಗಿ ನಿರಾಸೆ ಮೂಡಿಸಿದರು. 32.1 ಮಿಷೆಲ್ ಸ್ಟಾರ್ಕ್ ಬೌಲಿಂಗ್ ಮಾಡುತ್ತಿದ್ದ ಸಂದರ್ಭ ಮಳೆ ಕಾಣಿಸಿಕೊಂಡ ಪರಿಣಾಮ ಪಂದ್ಯ ಕೆಲಕಾಲ ಸ್ಥಗಿತ ಗೊಳಿಸಲಾಯಿತು. ಮಳೆ ನಿಂತ ಮೇಲೆ ಬ್ಯಾಟಿಂಗ್ ಆರಂಬಿಸಿದ ಲಂಕಾ ಬ್ಯಾಟರ್ಸ್ ಅಕ್ಷರಶಃ ಪರದಾಡಿದರು. ಧನಂಜಯ್ ಡಿಸಿಲ್ವ ( 7 ) ಚಮಿಕಾ ಕರುಣರತ್ನೆ (2) ಗಳಿಸಿ ಕ್ರಮವಾಗಿ ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ಗೆ ವಿಕೆಟ್ ನೀಡಿದರು. ದುಣಿತ್ ವೆಲ್ಲಾಲಗೆ 2 ರನ್ ಗಳಿಸಿ ರನ್ ಜೋಡಿಸುವ ಭರದಿಂದಲ್ಲಿ ಪ್ಯಾಟ್ ಕಮ್ಮಿನ್ಸ್ ರನೌಟ್ ಮಾಡಿದರು. ಮಹೇಶ ತೀಕ್ಷಣ ಶೂನ್ಯಕ್ಕೆ ಝಾಂಪ ಗೆ ಎಲ್ ಬಿಡಬ್ಲ್ಯೂ ಆದರು. ಲಹಿರು ಕುಮಾರ 4 ರನ್ ಗೆ ಮಿಷೆಲ್ ಸ್ಟಾರ್ಕ್ ಗೆ ಬೌಲ್ಡ್ ಆಗಿ ಕ್ರೀಸ್ ತೊರೆದರು.

ಒಂದು ಕೆಡೆ ವಿಕೆಟ್ ಗಳ ಪತನ ಆಗುತ್ತಿದ್ದರೂ ಚರಿತ್ ಹಸಲಂಕ 25 ರನ್ ಗಳಿಸಿ ರಕ್ಷಣಾತ್ಮ ಆಟದ ಪ್ರಯತ್ನದಲ್ಲಿದ್ದರು. ಆದರೆ ಗ್ಲೆನ್ ಮ್ಯಾಕ್ಸ್ ವೆಲ್ ಹಸಲಂಕ ವಿಕೆಟ್ ಪಡೆಯುದರೊಂದಿಗೆ ಶ್ರೀಲಂಕಾ 209 ರನ್ ಗೆ ಆಲೌಟ್ ಆಯಿತು.

ಆಸ್ಟ್ರೇಲಿಯ ಪರ ಉತ್ತಮ ಪ್ರದರ್ಶನ ನೀಡಿದ ಆಡಂ ಝಾಂಪ 4 ವಿಕೆಟ್ ಕಬಳಿಸಿದರೆ,ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ ತಲಾ 2, ಗ್ಲೆನ್ ಮ್ಯಾಕ್ಸ್ ವೆಲ್ 1 ವಿಕೆಟ್ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News