ಸಿಡ್ನಿ ಟೆಸ್ಟ್: ಆಸ್ಟ್ರೇಲಿಯಾ ತಂಡ 181 ರನ್‌ ಗಳಿಗೆ ಆಲೌಟ್

Update: 2025-01-04 05:41 GMT

ಸಿಡ್ನಿ: ಬಾರ್ಡರ್–ಗವಾಸ್ಕರ್ ಟೆಸ್ಟ್ ಕ್ರಿಕೆಟ್ ಸರಣಿಯ 5ನೇ ಹಾಗೂ ಅಂತಿಮ ಪಂದ್ಯದ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು 181 ರನ್‌ ಗಳಿಗೆ ಆಲೌಟ್ ಮಾಡಿದೆ.

ಸಿಡ್ನಿ ಕ್ರೀಡಾಂಗಣದಲ್ಲಿ ನಡೆದ ಮೊದಲ ದಿನದ ಪಂದ್ಯದಲ್ಲಿ ಟೀಂ ಇಂಡಿಯಾ 185 ರನ್ಗಳಿಗೆ ಆಲೌಟ್ ಆಗಿತ್ತು. ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ ಟೀಂ ಇಂಡಿಯಾದ ಮಾರಕ ದಾಳಿಗೆ ತತ್ತರಿಸಿದ್ದು, 181 ರನ್‌ ಗಳಿಗೆ ಆಲೌಟ್‌ ಆಗಿದೆ. ಆ ಮೂಲಕ 4 ರನ್‌ ಗಳ ಮುನ್ನಡೆ ಕಾಯ್ದುಕೊಂಡಿದೆ.

ಭಾರತ ಪರ ಅತ್ಯುತ್ತಮ ದಾಳಿ ನಡೆಸಿದ ಬುಮ್ರಾ 33 ರನ್ ನೀಡಿ 2 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಉರುಳಿಸಿದರು. ನಿತೀಶ್ ಕುಮಾರ್ ರೆಡ್ಡಿ ಇನ್ನೆರಡು ವಿಕೆಟ್‌ ಉರುಳಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News